ಹೊಸದಿಗಂತ ಡಿಜಿಟಲ್ ಡೆಸ್ಕ್:
18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಭರ್ಜರಿಯಾಗಿಯೇ ಶುಭಾರಂಭ ಮಾಡಿದೆ. ಈ ವಿಜಯಕ್ಕೆ ಆರ್ಸಿಬಿ ಮಾಜಿ ಮಾಲೀಕ ವಿಜಯ್ ಮಲ್ಯ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
“ಕೆಕೆಆರ್ ಎದುರು ಅತ್ಯದ್ಭುತ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆಗಳು. ಕಾಮೆಂಟೇಟರ್ಗಳು ಕೊನೆಗೂ ಆರ್ಸಿಬಿ ಒಳ್ಳೆಯ ಬೌಲಿಂಗ್ ಪಡೆ ಹೊಂದಿದೆ ಎಂದು ಹೇಳಿದ್ದನ್ನು ಕೇಳಿ ಖುಷಿಯಾಯಿತು. ಇನ್ನು ಬ್ಯಾಟಿಂಗ್ ಲೈನ್ ಅಪ್ ಬಗ್ಗೆ ಹೇಳುವುದೇನು ಬೇಡ” ಎಂದು ಟ್ವೀಟ್ ಮಾಡಿದ್ದಾರೆ.
ಕೆಕೆಆರ್ ವಿರುದ್ಧ ಆರ್ಸಿಬಿ ಕಳೆದೆರಡು ಆವೃತ್ತಿಗಳ ಒಟ್ಟು 4 ಪಂದ್ಯಗಳಲ್ಲೂ ಸೋಲನುಭವಿಸಿತ್ತು. ಈ ಗೆಲುವಿನೊಂದಿಗೆ ಆರ್ಸಿಬಿ ಸೋಲಿನ ಸರಪಳಿ ಕಳಚಿಕೊಂಡಿದೆ.
Congratulations to RCB for the emphatic win over KKR. Glad to hear the commentators finally say that RCB bowled well. The batting line up speaks for itself.
— Vijay Mallya (@TheVijayMallya) March 22, 2025