August 31, 2026
Monday, August 31, 2026
spot_img

ರೌಡಿಸಂಗೆ ನಡುಗಿದ ಮಲೆನಾಡ ಹೆಬ್ಬಾಗಿಲು, ಮಧ್ಯಾಹ್ನವೇ ರೌಡಿಶೀಟರ್ ಮರ್ಡ*ರ್

ಹೊಸದಿಗಂತ ವರದಿ ಶಿವಮೊಗ್ಗ:

ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಶುಕ್ರವಾರ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ನರಸಿಂಹನ ಮೇಲೆ ಮನಸೋಯಿಚ್ಛೆ ದಾಳಿ ನಡೆಸಲಾಗಿದೆ. ಆತನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ದಾಳಿಯ ಭೀಕರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !