ರಾಜ್ಯದಲ್ಲಿ 5 ವರ್ಷದೊಳಗಿನ 1.3 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಬಜೆಟ್‌ ಕಡಿತ ಕಾರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ ಪೈಕಿ 11,674 ತೀವ್ರತರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರದಿ ಪಾಲಕರಲ್ಲಿ ಭೀತಿ ಹುಟ್ಟುವಂತೆ ಮಾಡಿದೆ.

ಈ ಬೆಳವಣಿಗೆಗೆ ಬಜೆಟ್ ಕಡಿತ ಕೂಡ ಒಂದು ಕಾರಣವೆಂದು ಹೇಳಲಾಗುತ್ತಿದೆ. ಪೌಷ್ಠಿಕಾಂಶದ ಉಪಕ್ರಮಗಳನ್ನು ಬೆಂಬಲಿಸುವ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಕಾರ್ಯಕ್ರಮಕ್ಕಾಗಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಡುತ್ತದೆ. ಆದರೆ, 2024 ರ ಬಜೆಟ್‌ನಲ್ಲಿ 300 ಕೋಟಿ ರೂ. ಕಡಿತ ಮಾಡಲಾಗಿದ್ದು. ಇದು ಸಮಸ್ಯೆ ಉಲ್ಬಣಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿನ 65,911 ಅಂಗನವಾಡಿ ಕೇಂದ್ರಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 32.91 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಸ್ಯಾಮ್‌ನ್ನು ಮಗುವಿನ ಎತ್ತರಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆ ತೂಕವನ್ನು ಹೊಂದಿರುವ ಸ್ಥಿತಿ ಎಂದು ವಿವರಿಸಿದೆ. MAM (moderate acute malnutrition) ಮತ್ತು SAM (severe acute malnutrition) ಎರಡೂ ಮಗುವಿನ ಆರೋಗ್ಯದ ಮೇಲೆ ತೀವ್ರವಾದ ಆರೋಗ್ಯ ಪರಿಣಾಮಗಳನ್ನು ಹೊಂದಿವೆ. SAM ನಿಂದ ಬಳಲುತ್ತಿರುವ ಮಕ್ಕಳು ತಮ್ಮ ಎತ್ತರಕ್ಕೆ ತುಂಬಾ ಕಡಿಮೆ ತೂಕವನ್ನು ಹೊಂದಿರುತ್ತಾರೆ ಮತ್ತು ಅವರ ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆಯಿಂದಾಗಿ ರೋಗಗಳ ಸಂದರ್ಭದಲ್ಲಿ ಸಾಯುವ ಸಾಧ್ಯತೆ ಒಂಬತ್ತು ಪಟ್ಟು ಹೆಚ್ಚಿರುತ್ತದೆ. MAM ನಿಂದ ಬಳಲುತ್ತಿರುವವರು ಬಾಲ್ಯದಲ್ಲಿ ಅನಾರೋಗ್ಯ ಮತ್ತು ಮರಣದ ಅಪಾಯವನ್ನು ಹೊಂದಿರುತ್ತಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!