ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ ಮರುಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಇದೆ ವೇಳೆ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಪರ ವಕೀಲರು ಆದೇಶವನ್ನು 30 ದಿನಗಳ ಕಾಲ ಅಮಾನತಿನಲ್ಲಿಡುವಂತೆ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದನ್ನ ಪ್ರಶ್ನಿಸಿ ಮತ ಮರು ಎಣಿಕೆಗೆ ಕೋರಿ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.