July 21, 2026
Tuesday, July 21, 2026
spot_img

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ ಮರುಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಇದೆ ವೇಳೆ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಪರ ವಕೀಲರು ಆದೇಶವನ್ನು 30 ದಿನಗಳ ಕಾಲ ಅಮಾನತಿನಲ್ಲಿಡುವಂತೆ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದನ್ನ ಪ್ರಶ್ನಿಸಿ ಮತ ಮರು ಎಣಿಕೆಗೆ ಕೋರಿ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !