ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಂದಿಗ್ರಾಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬ್ಯಾನರ್ಜಿ ಅವರನ್ನು ಕೋಲ್ಕತ್ತಾದ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಎಡ ಕಾಲಿಗೆ ಹಾಗೂ ಬಲ ಭಾಗದ ಭುಜಕ್ಕೆ ಗಂಭೀರ ಗಾಯವಾಗಿದೆ. ಹಾಗೆಯೇ ಅವರಿಗೆ ಎದೆ ನೋವು ಕೂಡ ಕಾಣಿಸಿಕೊಂಡಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿ ಮಮತಾ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.