Tuesday, July 5, 2022

Latest Posts

ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೆ ಗದ್ದುಗೇರಿದ ಮಮತಾ ಬ್ಯಾನರ್ಜಿ: ಮೇ 5 ರಂದು ಸಿಎಂ ಆಗಿ ಪ್ರಮಾಣವಚನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರಕ್ಕೇರಿರುವ ಮಮತಾ ಬ್ಯಾನರ್ಜಿ ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಶ್ಚಿಮ ಬಂಗಾಳದ 292 ವಿಧಾನಸಭೆ ಕ್ಷೇತ್ರಗಳಲ್ಲಿ 217 ಕ್ಷೇತ್ರಗಳಲ್ಲಿ ಟಿಎಂಸಿ ಭರ್ಜರಿ ಜಯ ಗಳಿಸಿದ್ದು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಂದಿಗ್ರಾಮ ಕ್ಷೇತ್ರದಲ್ಲಿ ಪರಾಭವಗೊಂಡಿರುವ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss