ಈ ಬಾರಿ ಎಲ್ಲಿಂದ ಸ್ಪರ್ಧಿಸಿದರೂ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ: ಮಾಜಿ ಜಡ್ಜ್‌ಗೆ ಮಮತಾ ಬ್ಯಾನರ್ಜಿ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಅವರು ಬಿಜೆಪಿ ಸೇರಿದ್ದು, ಈ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೀವು ಎಲ್ಲಿಂದ ಸ್ಪರ್ಧಿಸಿದರೂ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಸವಾಲೆಸೆದಿದ್ದಾರೆ.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳ ಮೂಲಕ ಸಾವಿರಾರು ಯುವಕರ ಉದ್ಯೋಗಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು. ಜೊತೆಗೆ ಯುವಕರು ಯಾವುದೇ ಕಾರಣಕ್ಕೂ ನಿಮ್ಮನ್ನು ಕ್ಷಮಿಸುವುದಿಲ್ಲ. ನಿಮ್ಮ ಎಲ್ಲಾ ತೀರ್ಪುಗಳು ಪ್ರಶ್ನಾರ್ಹವಾಗಿವೆ. ನಿಮ್ಮ ಸೋಲನ್ನು ನಾವು ಖಚಿತಪಡಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಗಂಗೋಪಾಧ್ಯಾಯ ಅವರು ಗುರುವಾರ ಬಿಜೆಪಿ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. If no wrong by WB Govt let they can approach SC and get verdict that the HC judgement is wrong and politically motivated judgement before LS election. Let SC can give truth about recruitment process

LEAVE A REPLY

Please enter your comment!
Please enter your name here

error: Content is protected !!