Wednesday, July 6, 2022

Latest Posts

ಈ ಐತಿಹಾಸಿಕ ಸಾಧನೆಗಾಗಿ ಜನರಿಗೆ ಆಭಾರಿ: ಮಮತಾ ಬ್ಯಾನರ್ಜಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಭರ್ಜರಿ ಮುನ್ನಡೆ ಪಡೆದುಕೊಂಡಿದ್ದು, 216ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಇದರ ಮಧ್ಯೆ ಮಮತಾ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ , ನಂದಿಗ್ರಾಮ್​ದ ಬಗ್ಗೆ ನಾನು ಚಿಂತಿಸಿಲ್ಲ. ನಂದಿಗ್ರಾಮ್​ಕ್ಕಾಗಿ ಹೋರಾಡಿದ್ದೇನೆ. ಅಲ್ಲಿನ ಜನರು ತಮಗೆ ಬೇಕಾದ ಯಾವುದೇ ತೀರ್ಪು ನೀಡಲಿ. ನಾನು ಅದನ್ನ ಸ್ವೀಕರಿಸುತ್ತೇನೆ. ಆದರೆ ನಾವು ಈಗಾಗಲೇ 221ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೆಟ್ಟ ರಾಜಕಾರಣ ಮಾಡಿರುವ ಬಿಜೆಪಿ ಸೋಲು ಕಂಡಿದೆ. ಚುನಾವಣಾ ಆಯೋಗದಿಂದಲೂ ನಾವು ಅನೇಕ ತೊಂದರೆ ಅನುಭವಿಸಿದ್ದೇವೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ಈ ಐತಿಹಾಸಿಕ ಸಾಧನೆಗೆ ನಾವು ಇಲ್ಲಿನ ಜನರಿಗೆ ಆಭಾರಿಯಾಗಿದ್ದೇವೆ. ಇದೀಗ ಕೋವಿಡ್​ ವಿರುದ್ಧದ ಹೋರಾಟದಲ್ಲಿ ನಾವು ಮುಂದುವರೆಯುತ್ತೇವೆ ಎಂದಿದ್ದಾರೆ.
ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ ಈಗಾಗಲೇ ಟಿಎಂಸಿ 216ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದು, ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಮಮತಾ ಬ್ಯಾನರ್ಜಿ ನಂದಿಗ್ರಾಮ್​ದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss