ಹೆಲಿಕಾಪ್ಟರ್ ತುರ್ತು ಭೂಸ್ಪರ್ಶದ ವೇಳೆ ಮಮತಾ ಬ್ಯಾನರ್ಜಿಗೆ ಗಾಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹವಾಮಾನ ವೈಪರೀತ್ಯದಿಂದಾಗಿ ಉತ್ತರ ಬಂಗಾಳದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಈ ವೇಳೆ ಮುಖ್ಯಮಂತ್ರಿಯ ಬೆನ್ನು ಮತ್ತು ಮೊಣಕಾಲಿಗೆ ಸಣ್ಣ ಗಾಯವಾಗಿದ್ದು, ಅವರನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಭಾರೀ ಮಳೆಯಿಂದಾಗಿ ಉತ್ತರ ಬಂಗಾಳದ ಸಲಗರಾದಲ್ಲಿರುವ ಸೇನಾ ವಾಯುನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಆ ಬಳಿಕ ರಸ್ತೆ ಮಾರ್ಗದ ಮೂಲಕವಾಗಿ ಮಮತಾ ಬ್ಯಾನರ್ಜಿ ಪ್ರಯಾಣ ಮಾಡಿದರು. ಮಧ್ಯಾಹ್ನದ ವೇಳೆಗೆ ಮಮತಾ ಬ್ಯಾನರ್ಜಿ ಕೋಲ್ಕತ್ತಾಗೆ ಆಗಮಿಸಿದರು. ನೇರವಾಗಿ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!