ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಆರೋಪಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ಮುಸ್ಲಿಮರಿಗೆ, ಅದರಲ್ಲೂ ಮುಸ್ಲಿಂ ಮಹಿಳೆಯರಿಗೆ ಒಳ್ಳೆಯದು. ಆದರೆ ಕೆಲವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದು ತಪ್ಪು ಎಂದರು.
ಇದಕ್ಕೂ ಮುನ್ನ, ಬಿಜೆಪಿ ಸಂಸದ ಜಗದಂಬಿಕಾ ಪಾಲ್ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳನ್ನು ಬೆಂಬಲಿಸಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಟೀಕಿಸಿದರು ಮತ್ತು ಈ ಕಾನೂನನ್ನು ದೇಶಾದ್ಯಂತ ಜಾರಿಗೆ ತರುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು.