Monday, August 8, 2022

Latest Posts

“ಮಮತಾ ಬ್ಯಾನರ್ಜಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ, ನಾನು ಅವರ ಬೆಂಬಲಕ್ಕಿರುವೆ”

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಂದಿಗ್ರಾಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ  ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ. ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ. ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss