ಹೊಸದಿಗಂತ ಡಿಜಿಟಲ್ ಡೆಸ್ಕ್:
2016ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮೂಲಕ ಮಾಡಿದ ನೇಮಕಾತಿಗಳನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ತೀರ್ಪನ್ನು ನಾನು ಒಪ್ಪುವುದಿಲ್ಲ ಎಂದು ವಜಾಗೊಂಡ ಶಿಕ್ಷಕರ ಪರವಾಗಿ ನಾನಿದ್ದೇನೆ. ನಿಮಗಾಗಿ ಜೈಲಿಗೆ ಹೋಗಲೂ ಸಿದ್ಧ ಎಂದು ಹೇಳಿದ್ದಾರೆ.
2 ತಿಂಗಳೊಳಗೆ ಉದ್ಯೋಗ ಕಳೆದುಕೊಂಡ ಶಿಕ್ಷಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ಮತ್ತೆ ನಿಮ್ಮ ನಿಮ್ಮ ಶಾಲೆಗಳಿಗೆ ಹಿಂತಿರುಗಬಹುದು. ನಿಮಗೆ ಇನ್ನೂ ಯಾವುದೇ ವಜಾ ಪತ್ರವನ್ನು ನೀಡಿಲ್ಲ ಎಂದರೆ ನೀವು ಇನ್ನೂ ಸೇವೆಯಲ್ಲಿದ್ದೀರಿ ಎಂದರ್ಥ. ಯಾವುದೇ ಅರ್ಹ ಅಭ್ಯರ್ಥಿ ಕೆಲಸ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಕರ್ತವ್ಯ. ಯಾರಿಗೂ ಉದ್ಯೋಗ ಇಲ್ಲದಂತೆ ಮಾಡಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.