ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸರ್ಕಾರವನ್ನು ಸರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಅವರು ರಾಜೀನಾಮೆ ನೀಡುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಹೇಳಿಕೆ ಬಂದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕುರಿತು ಮಾತನಾಡಿದ ಜೋಶಿ, “ಮಮತಾ ಬ್ಯಾನರ್ಜಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ಸರ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ, ಬಹುಸಂಖ್ಯಾತ ಸಮುದಾಯಕ್ಕೆ ನ್ಯಾಯ ನೀಡಲು ಸಾಧ್ಯವಾಗುತ್ತಿಲ್ಲ, ರಾಜೀನಾಮೆ ನೀಡುವುದು ಉತ್ತಮ” ಎಂದು ಜೋಶಿ ಟಾಂಗ್ ನೀಡಿದ್ದಾರೆ.