ಅನಂತ್-ರಾಧಿಕಾ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ನಡೆಯಲಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸಲಿದ್ದಾರೆ.

ಮುಂಬೈನಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಸಹ ಭೇಟಿಯಾಗಬಹುದು.

“ನಾನು ಮುಕೇಶ್ ಅಂಬಾನಿ ಪುತ್ರನ ಮದುವೆಗೆ ಮುಂಬೈಗೆ ಹೋಗುತ್ತಿದ್ದೇನೆ. ನಾಳೆ ಉದ್ಧವ್ ಠಾಕ್ರೆ ಅವರೊಂದಿಗೆ ಅಪಾಯಿಂಟ್ಮೆಂಟ್ ಇದೆ. ನಾನು ಅಲ್ಲಿ ಶರದ್ ಪವಾರ್ ಅವರನ್ನು ಕೂಡ ಭೇಟಿ ಮಾಡುತ್ತೇನೆ. ಚುನಾವಣೆಯ ನಂತರ ನಾವು ಭೇಟಿಯಾಗಲಿದ್ದೇವೆ ರಾಜಕೀಯ ಚರ್ಚೆ ನಡೆಯಲಿದೆ. ಹಾಗಾಗಿ ಅವರನ್ನೂ ಭೇಟಿಯಾಗುವ ಸಾಧ್ಯತೆ ಇದೆ ಎಂದು ಸಿಎಂ ಮಮತಾ ಸುದ್ದಿಗಾರರಿಗೆ ತಿಳಿಸಿದರು.

ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಜುಲೈ 12 ರಂದು ರಾಧಿಕಾ ಮರ್ಚೆಂಟ್ ಅವರೊಂದಿಗೆ ವಿವಾಹವಾಗಲಿದ್ದಾರೆ.

ವಿವಾಹ ಮಹೋತ್ಸವದ ಅಂಗವಾಗಿ, ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಇತ್ತೀಚೆಗೆ ಜುಲೈ 2 ರಂದು ಪಾಲ್ಘರ್‌ನ ಸ್ವಾಮಿ ವಿವೇಕಾನಂದ ವಿದ್ಯಾಮಂದಿರದಲ್ಲಿ ಹಿಂದುಳಿದವರಿಗಾಗಿ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here