ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಮತ್ತೆ ತೃಣ ಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೊಲ್ಕತ್ತಾದ ರಾಜಭವನದಲ್ಲಿ ಕೋವಿಡ್ ನಿಯಮಗಳ ಅನುಸಾರ ಸರಳವಾಗಿ ಪ್ರಮಾಣ ವಚನ ಕಾರ್ಯಕ್ರಮ ನಡೆಸಲಾಗಿದೆ.
ಈ ವೇಳೆ ರಾಜ್ಯಪಾಲ ಜಗದೀಪ್ ಧನಕರ್ ಅವರು ಪ್ರಮಾಣವಚನ ಬೋಧಿಸಿದರು.
2021ರ ವಿಧಾನಸಭಾ ಚುನಾವಣೆಯಲ್ಲಿ 213 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ದೀದಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.