ಹೊಸದಿಗಂತ ಆನ್ ಲೈನ್ ಡೆಸ್ಕ್:
ಚುನಾವಣಾ ಪ್ರಚಾರದ ವೇಳೆ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಟಿಎಂಸಿ ಪಕ್ಷ ತಿಳಿಸಿದೆ.
ಮಮತಾ ಬ್ಯಾನರ್ಜಿ ಅವರು ಇಂದು ಮಧ್ಯಾಹ್ನ ಗಾಲಿಕುರ್ಚಿ ಮೂಲಕ ಹಜ್ರಾ ಸಾರ್ವಜನಿಕ ರೋಡ್ ಶೋದಲ್ಲಿ ಪ್ರಚಾರ ಮಾಡಲಿದ್ದಾರೆ. ಬಳಿಕ ಅವರು ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.
ಕಳೆದ ವಾರ ವಿಧಾನ ಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಪ್ರಚಾರದ ವೇಳೆ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.12ರಂದು ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಂದು ಮೊದಲ ಸಾರ್ವಜನಿಕ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.