ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
2024ರ ಲೋಕಸಭಾ ಚುನಾವಣೆಯ ಬಗ್ಗೆ ಗಮನ ಹರಿಸಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ.
2021 ರ ಬಂಗಾಳ ಚುನಾವಣೆಯಲ್ಲಿ ಟಿಎಂಸಿಗೆ ಚುನಾವಣಾ ಪ್ರಚಾರ ಯಶಸ್ವಿಯಾಗಿ ರೂಪಿಸಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಇತ್ತೀಚೆಗಷ್ಟೆ ದೆಹಲಿಯ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ್ದರು.