ಕುಡಿದ ಅಮಲಿನಲ್ಲಿ ಗಗನಸಖಿಯೊಂದಿಗೆ ಅನುಚಿತ ವರ್ತನೆ: ವ್ಯಕ್ತಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತ್ತೀಚೆಗೆ ವಿಮಾನಗಳಲ್ಲಿ ಪ್ರಯಾಣಿಕರು ಗಗನಸಖಿಯರಿಗೆ ಲೈಂಗಿಕ ಕಿರುಕುಳ ನೀಡುವ ಘಟನೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಗಗನಸಖಿಯೊಬ್ಬಳಿಗೆ ಕಿರುಕುಳ ನೀಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಂಜಾಬ್‌ನ ಜಲಂಧರ್‌ನ ಕೋಟ್ಲಿ ಗ್ರಾಮಕ್ಕೆ ಸೇರಿದ ರಾಜೀಂದರ್ ಸಿಂಗ್ ಅವರು ಗಗನಸಖಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಶನಿವಾರ ಕಿರುಕುಳ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ‘ಘಟನೆಯನ್ನು ಗಗನಸಖಿ ಸಿಬ್ಬಂದಿಯ ಗಮನಕ್ಕೆ ತರಲಾಗಿತ್ತು. ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಆರೋಪಿಸಲಾಗಿದೆ’.

ಸಿಬ್ಬಂದಿ ಅಮೃತಸರ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಏರ್‌ಲೈನ್‌ನ ಸಹಾಯಕ ಭದ್ರತಾ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಇಲ್ಲಿನ ಶ್ರೀ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಬಂಧಿಸಲಾಗಿದೆ. ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!