ಹೊಸದಿಗಂತ ವರದಿ ಮಡಿಕೇರಿ:
ವ್ಯಕ್ತಿಯೊಬ್ಬ ತಮ್ಮ ಮನೆಯ ಹಿಂಭಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆಹಚ್ಚಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಸಿದ್ದಾಪುರ ಸಮೀಪದ ಗೂಡ್ಲೂರು ಚನ್ನಂಗಿ ನಿವಾಸಿ ಕೆ.ಆರ್. ಕಿರಣ್ ಅಲಿಯಾಸ್ ಐರಿ ಕಿರಣ್ (60) ಬಂಧಿತ ಆರೋಪಿ.
ಆರೋಪಿಯು ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದಾಗಿ ದೊರೆತ ಮಾಹಿತಿಯ ಮೇರೆಗೆ ಮಡಿಕೇರಿ ಡಿವೈಎಸ್‌ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತದ ನಿರೀಕ್ಷಕ ಅನೂಪ್ ಮಾದಪ್ಪ, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಭಾನುವಾರ ದಾಳಿ ನಡೆಸಿದ್ದಾರೆ. ಈ ವೇಳೆ ಮಾಲು ಸಹಿತ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.