ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಹುಲಿಗೆ ವಿಷಪ್ರಾಶನ ಮಾಡಿಸಿದ ಆರೋಪದ ಮೇಲೆ ಅರಣ್ಯ ಇಲಾಖೆ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.
ಪ್ರಕರಣ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸ್ಮಿತ್ ಬಿಜೂರ್ ನೇತೃತ್ವದ ತಂಡ ಶನಿವಾರ ಹನೂರಿನಲ್ಲಿ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯನ್ನು ಚುರುಕುಗೊಳಿಸಿದೆ. 12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳಿಗೆ ಎದುರಾಗಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.
ಆರೋಪಿಗಳು ಹುಲಿಯ ಮೃತದೇಹವನ್ನು ಹೂಳಲು ಕಂದಕಕ್ಕೆ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ. ಆದರೆ,250 ಕೆಜಿ ತೂಕದ ದೇಹವನ್ನು ಸ್ಥಳಾಂತರಿಸಲು ಸಾಧ್ಯವಾಗದೆ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ, ವಿವಿಧೆಡೆ ಹೂತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ತನಿಖೆ ಆರಂಭಿಸಿದ್ದು, ಈ ನಡುವೆ ವಾಹನೆ ಹಿಡಿದು ಸ್ನಿಫರ್ ಡಾಗ್ಸ್ ಗಳು ಪಚ್ಚೇದೊಡ್ಡಿ ಗ್ರಾಮದ ಮನೆಯೊಂದಕ್ಕೆ ತೆರಳಿವೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.