ಕದ್ದುಮುಚ್ಚಿ ಯುವತಿಯರ ಫೋಟೋ ತೆಗೆದು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುತ್ತಿದ್ದ ಕಾಮುಕ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎಂ.ಜಿ.ರೋಡ್, ಬ್ರಿಗೆಡ್‌ರೋಡ್‌ನಂತಹ ಪ್ರಖ್ಯಾತ ಸ್ಥಳಗಳಲ್ಲಿ ಯುವತಿಯರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ಅವರ ಅನುಮತಿಯಿಲ್ಲದೆ ತೆಗೆದು, ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುತ್ತಿದ್ದ 19 ವರ್ಷದ ಯುವಕನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಂಧಿತನನ್ನು ಹುಸೇನ್ ಎಂದು ಗುರುತಿಸಲಾಗಿದೆ. ಈತ ‘ದಿಲ್ಬರ್ ಜಾನಿ’ ಎಂಬ ನಕಲಿ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಹಲವು ಯುವತಿಯರ ಫೋಟೋಗಳನ್ನೂ ಅಪ್ಲೋಡ್ ಮಾಡುತ್ತಿದ್ದ. ಈ ಖಾತೆಯಲ್ಲಿ ಯುವತಿಯರ ಖಾಸಗಿ ಕ್ಷಣಗಳನ್ನು ‘ಬೆಂಗಳೂರು ನೈಟ್ ಲೈಫ್’ ಎಂದು ಬರೆದು, ಸಾರ್ವಜನಿಕವಾಗಿ ಹಂಚುತ್ತಿದ್ದ.

ಅಶೋಕನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಖಾತೆಯ ಶೋಧನೆಯಲ್ಲಿ ಹುಸೇನ್‌ನ ಸಂಪರ್ಕ ಸಿಗುತ್ತಿದಂತೆ, ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ, ಪೊಲೀಸರು ಈ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!