ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸಭ್ಯವಾಗಿ ಕಾಣುವಂತೆ ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ, ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಕೆ.ಆರ್.ಪುರಂ ನಿವಾಸಿ ಗುರುದೀಪ್ ಸಿಂಗ್(26) ಬಂಧಿತ ವ್ಯಕ್ತಿ. ಯುವತಿ ದೂರಿನ ಮೆರೆಗೆ ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಗುರುದೀಪ್ ಸಿಂಗ್, ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ ಪದವಿ ಪಡೆದಿದ್ದು, ಕೆಲಸ ಹುಡುಕುತ್ತಿದ್ದ. ಹೀಗಿರುವಾಗ ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ ಮತ್ತು ವಿಡಿಯೋ ಮಾಡಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಬಗ್ಗೆ ಪೊಲೀಸರಿಗೆ ಟ್ಯಾಗ್ ಮಾಡಿ ಓರ್ವ ಯುವತಿ ದೂರು ನೀಡಿದ್ದಳು.