spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ| 4.33 ಲಕ್ಷ ರೂ. ಸೊತ್ತು ಸಹಿತ ಅಂತರ್ ಜಿಲ್ಲಾ ಕಳವು ಆರೋಪಿ ಪೊಲೀಸ್ ಬಲೆಗೆ

- Advertisement -Nitte

ಹೊಸದಿಗಂತ ವರದಿ, ಉಡುಪಿ:

ಜಿಲ್ಲಾ ಪೊಲೀಸರು ಅಂತರ ಜಿಲ್ಲಾ ಕಳ್ಳನೋರ್ವನನ್ನು ಬಂಧಿಸಿದ್ದಾರೆ‌. ಎರಡು ಬೈಕ್, ಎರಡು ಮೊಬೈಲ್ ಮತ್ತು 4.33 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ನಿಟ್ಟೆ ಅತ್ತೂರು ನಿವಾಸಿ ಸುರೇಶ್ ಪೂಜಾರಿ (49) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಶಿರ್ವ, ಹಿರಿಯಡ್ಕ ಕಾರ್ಕಳ ನಗರ, ಪಡುಬಿದ್ರಿ, ಮೂಲ್ಕಿ, ದಾವಣಗೆರೆ, ಬೆಳಗಾವಿ, ಉಡುಪಿ ನಗರ, ಮಲ್ಪೆ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ನಗರದ ಬನ್ನಂಜೆಯಲ್ಲಿರುವ ಮಂಜುನಾಥ ಕಣ್ಣಿನ ಆಸ್ಪತ್ರೆಯಲ್ಲಿ ಸೆ. 23ರಂದು ರಾತ್ರಿ ಕಳ್ಳತನ ನಡೆದಿತ್ತು. ಶೆಟರ್‌ನ ಬೀಗವನ್ನು ಮುರಿದು, ಡ್ರಾವರ್‌ನಲ್ಲಿದ್ದ 20ಸಾವಿರ ರೂ., ಇನ್ನೊಂದು ಡ್ರಾವರ್‌ನಲ್ಲಿದ್ದ 4.50ಲಕ್ಷ ರೂ. ನಗದು ಹಾಗೂ ರಿಸೆಪ್ಷನ್‌ನಲ್ಲಿದ್ದ 4,500 ರೂ. ಹಣವನ್ನು ಮತ್ತು ಸಿಸಿಟಿವಿ ಡಿವಿಆರ್‌ನ್ನು ಕಳವು ಮಾಡಲಾಗಿತ್ತು. ಈ ಕುರಿತು ಆಸ್ಪತ್ರೆಯ ವೈದ್ಯೆ ಡಾ. ಶಕಿಲಾ ಸಚಿನ್ ಉಡುಪಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡು ಆರೋಪಿ ಹಾಗೂ ಸ್ವತ್ತು ಪತ್ತೆಯ ಬಗ್ಗೆ ಕೃತ್ಯ ನಡೆದ ಆಸ್ಪತ್ರೆಯ ಆಸುಪಾಸಿನ ಕಟ್ಟಡ, ಮನೆ , ಅಂಗಡಿಗಳಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಪತ್ತೆಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಆತನ ಚಹರೆಗಳು ಕಾರ್ಕಳ ನಗರ ಪೊಲೀಸ್ ಠಾಣೆಯ ಎಂ.ಒ.ಬಿ ಆಸಾಮಿಯಾದ ಸುರೇಶ್‌ ಪೂಜಾರಿ ಎಂಬಾತನಿಗೆ ಹೋಲಿಕೆಯಾಗಿತ್ತು. ಪ್ರಕರಣದ ವಿಶೇಷ ಕರ್ತವ್ಯದಲ್ಲಿ ತೆರಳಿದ ಉಡುಪಿ ನಗರ ಠಾಣೆಯ ಸಿಬ್ಬಂದಿ ಲೋಕೇಶ ಹಾಗೂ ಸಂತೋಷ ರಾಥೋಡ್ ಅವರು ಆರೋಪಿಯನ್ನು ಸೋಮವಾರ ಮುಂಜಾನೆ 5.30ರ ಸುಮಾರಿಗೆ ಉಡುಪಿ ಕೆಎಸ್‌ಆರ್‌ಟಿಸಿ ಬಸ್ಸುನಿಲ್ದಾಣದ ಬಳಿ ವಶಕ್ಕೆ ಪಡೆದು ಠಾಣೆಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದಾಗ ಆರೋಪಿತನು ಈ ಹಿಂದೆ ಶಿರ್ವ, ಹಿರಿಯಡ್ಕ, ಕಾರ್ಕಳ ನಗರ ಠಾಣೆ, ಪಡುಬಿದ್ರಿ, ದಾವಣಗೆರೆ , ಬೆಳಗಾವಿ, ಮೂಲ್ಕಿಗಳಲ್ಲಿ ಕಳ್ಳತನ ನಡೆಸಿದ್ದು, ಇತ್ತೀಚೆಗೆ ಉಡುಪಿಯ ಮಂಜುನಾಥ ಕಣ್ಣಿನ ಆಸ್ಪತ್ರೆ, ಉಡುಪಿ ಮತ್ತು ಮಲ್ಪೆ ಸೋಸೈಟಿಯಲ್ಲಿ ನಗದು ಹಾಗೂ ಉಡುಪಿಯ ಗರಡಿ ರಸ್ತೆಯಲ್ಲಿ ಬೈಕ್ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಿ, ಆತನಿಂದ ಒಟ್ಟು 4.33ಲಕ್ಷ ರೂ. ನಗದು, 2 ಬೈಕ್ ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಸುರೇಶ್‌ ಪೂಜಾರಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್ ಪಿ., ಪ್ರೋಬೆಷನರಿ ಪಿಎಸ್‌ಐ ರವರಾದ ಸುಹಾಸ್‌ ಆರ್‌., ಪ್ರಸಾದ್‌ಕುಮಾರ್‌, ಎಎಸ್‌ಐ ಜಯಕರ, ಅರುಣ್‌ ಸಿಬ್ಬಂದಿಯವರಾದ ಲೋಕೇಶ್‌, ಸಂತೋಷ ರಾಠೋಡ್, ಬಾಲಕೃಷ್ಣ, ರಿಯಾಜ್‌ ಅಹಮ್ಮದ್‌, ರಾಜೇಶ್‌, ದೇವರಾಜ್‌, ಕಿರಣ್, ಚೇತನ್‌, ಆನಂದ ಗಾಣಿಗ, ವಿಶ್ವನಾಥ ಶೆಟ್ಟಿ, ಹೇಮಂತ್‌, ಕಾರ್ತಿಕ್‌, ಲಿಂಗರಾಜು, ರಾಕೇಶ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss