Friday, August 12, 2022

Latest Posts

ಕುಡಿದ ಮತ್ತಿನಲ್ಲಿ ಪತ್ನಿ ಕೊಂದು ಪರಾರಿಯಾಗಿದ್ದ ಪತಿ ಬಂಧನ

ಹೊಸದಿಗಂತ ವರದಿ, ಮೈಸೂರು:

ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಮೈಸೂರಿನ ಜಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ತಾಲ್ಲೂಕಿನ ನಗರ್ತಹಳ್ಳಿ ಗ್ರಾಮದ ನಿವಾಸಿ ರಮೇಶ್ ನಾಯಕ್ (30) ಬಂಧಿತ ಆರೋಪಿ. ಈತನೇ ತನ್ನ ಪತ್ನಿ ಕುಮಾರಿ (30) ಎಂಬವರನ್ನು ಹತ್ಯೆ ಮಾಡಿದ್ದ.

ಹತ್ತು ವರ್ಷಗಳ ಹಿಂದೆ ಮದುವೆಯಾದ ಈ ದಂಪತಿಗೆ ಒಬ್ಬ ಪುತ್ರ ಇದ್ದಾನೆ. ಕುಡಿದ ಮತ್ತಿನಲ್ಲಿ ಗುರುವಾರ ಬೆಳಿಗ್ಗೆ ರಮೇಶ್ ತನ್ನ ಹೆಂಡತಿಯೊoದಿಗೆ ಜಗಳವಾಡಲು ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ರಾಡ್‌ನಿಂದ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿ, ಪರಾರಿಯಾಗಿದ್ದಾನೆ. ಮನೆಯೊಳಗಿಂದ ರಕ್ತ ಹೊರಗೆ ಹರಿದು ಬರಲಾರಂಭಿಸಿದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ, ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss