ಬರ್ತಡೇ ಪಾರ್ಟಿಗೆ ಹೋಗಿದ್ದ ಅಪ್ರಾಪ್ತನ ಮೇಲೆ ಹಲ್ಲೆ ಮಾಡಿ ಕೊಲೆಮಾಡಿದ ಕಟುಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸ್ನೇಹಿತನ ಬರ್ತಡೇ ಪಾರ್ಟಿಗೆ ಹೋಗಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ನವದೆಹಲಿಯ ಪೋಲೀಸರು ಬಂಧಿಸಿದ್ದಾರೆ. ಮದನ್‌ಪುರ ಖಾದರ್ ಪ್ರದೇಶದಲ್ಲಿ ಘಟನೆ ನಡೆದಿದೆ.

ಸರಿತಾ ವಿಹಾರ್ ನಿವಾಸಿ 15 ವರ್ಷದ ಫೈಜಾನ್ ಅಲಿ ತನ್ನ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಎಂದು ಮೃತನ ಕುಟುಂಬ ಸದಸ್ಯರು ಹೇಳಿದ್ದಾರೆ. ಗಾಯಗೊಂಡ ಅಲಿ ಸರಿತಾ ವಿಹಾರ್ ಬಳಿ ಪತ್ತೆಯಾಗಿದ್ದಾರೆ. ಪೊಲೀಸರು ಅಲಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಿಸದೇ ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದಾನೆ.

ಪ್ರಾಥಮಿಕ ತನಿಖೆಯ ಪ್ರಕಾರ, 18 ವರ್ಷದ ಮೋನು ಇದ್ದ ಪಾರ್ಟಿಗೆ ಅಲಿ ಹೋಗಿದ್ದ.ವಿವಾದದ ಹಿನ್ನೆಲೆಯಲ್ಲಿ ಮೋನು ಎಂಬಾತ ಅಲಿ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ, ಮೋನು ಅವರು ಪ್ರಜ್ಞೆ ತಪ್ಪುವವರೆಗೂ ಅಲಿಯನ್ನು ಥಳಿಸುತ್ತಿದ್ದರು ಎಂಬುದು ತನಿಖೆಯ ವೇಳೆ ಹೊರಬಿದ್ದಿದೆ.

ಮೋನು ರಾಜಸ್ಥಾನಿ ಕ್ಯಾಂಪ್‌ನ ನಿವಾಸಿಯಾಗಿದ್ದು, ಮೊಟ್ಟೆ ಅಂಗಡಿಯನ್ನು ಇಟ್ಟುಕೊಂಡಿದ್ದ ಎನ್ನಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!