ಕೇರಳ: ರಸ್ತೆಯಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕೇರಳದ ಕೊಚ್ಚಿಯ ರಸ್ತೆಯೊಂದರಲ್ಲಿ ಶನಿವಾರ ವ್ಯಕ್ತಿಯೊಬ್ಬ ಮಚ್ಚಿನಿಂದ ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಈ ಘಟನೆಯು ಕಲೂರಿನ ಆಜಾದ್ ರಸ್ತೆಯಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಾರ್ವಜನಿಕರ ಎದುರಿಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಯುವಕ ಮತ್ತು ಇಬ್ಬರು ಮಹಿಳೆಯರ ನಡುವೆ ವಾಗ್ವಾದದ ನಂತರ ಈ ಘಟನೆ ನಡೆದಿದೆ. ಆತ ಮಹಿಳೆಯ ತಲೆಗೆ ಮಚ್ಚಿನಿಂದ ಹೊಡೆಯಲು ಯತ್ನಿಸಿದನೆಂದು ವರದಿಯಾಗಿದೆ, ಆದರೆ ಆಕೆಯ ಸ್ನೇಹಿತೆ ಹೊಡೆತವನ್ನು ತಡೆಯುವಲ್ಲಿ ಯಶಸ್ವಿಯಾದರು. ದಾಳಿಯಲ್ಲಿ ಆಕೆಯ ಕೈಗೆ ಗಾಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!