ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆ ಹೋಗುವ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ ಘಟನೆ ಸೋಮವಾರ ನಡೆದಿದೆ.
ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ. ನಂತರ ಗಾಯಗೊಂಡಿದ್ದ ವ್ಯಕ್ತಿಯನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಘಟನೆ ಬಳಿಕ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯಗಳು ಕಂಡು ಬಂದಿತ್ತು. ಇದರಿಂದಾಗಿ ಹಲವಾರು ಪ್ರಯಾಣಿಕರು ಸಂಕಷ್ಟ ಎದುರಿಸಿದರು. ಬಳಿಕ ಪ್ರಯಾಣಿರಿಗೆ ತೊಂದರೆ ಆಗದಂತೆ ಬಿಎಂಆರ್ಸಿಎಲ್ ನಾಲ್ಕು ಟ್ರಿಪ್‌ಗಳ ಶಾರ್ಟ್ ಲೂಪ್ ರೈಲುಗಳನ್ನು ಓಡಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಮಾಡಿದರು.