September 27, 2026
Sunday, September 27, 2026
spot_img

ನಿರ್ಮಾಣ ಹಂತದಲ್ಲಿದ್ದ ಮನೆ ತೆರವಿಗೆ ಸಜ್ಜು: ತಹಶೀಲ್ದಾರ್ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹ*ತ್ಯೆಗೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ರಾಧಾಕೃಷ್ಣ ಎಂಬವರು ಔಷಧ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆ ಯತ್ನಕ್ಕೂ ಮುನ್ನ ಅವರು ಬರೆದಿಟ್ಟ ಪತ್ರದಲ್ಲಿ ತಮ್ಮ ಸಾವಿಗೆ ತಹಶೀಲ್ದಾರ್ ಹಾಗೂ ಜಿಲ್ಲಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ. ಈ ಘಟನೆ ತಿಳಿದ ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಸ್ಥಿತಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಅಧಿಕಾರಿಗಳು ತೆರವು ಕ್ರಮ ಕೈಗೊಳ್ಳಲು ಮುಂದಾಗಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ಜಮೀನಿನಲ್ಲಿ ಕಟ್ಟಡ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕ್ರಮದ ಮಧ್ಯೆ ಮನನೊಂದು ರಾಧಾಕೃಷ್ಣ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

Must Read