spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೆಆರ್‌ಎಸ್ ಹಿನ್ನೀರಿನಲ್ಲಿ ಬಿದ್ದಿದ್ದ ಯುವಕನ ಶವ ಪತ್ತೆ

- Advertisement -Nitte

ಹೊಸದಿಗಂತ ವರದಿ, ಮೈಸೂರು:

ಇಲವಾಲ ಸಮೀಪದ ಹೊಸರಾಮನಹಳ್ಳಿ ಸೇತುವೆ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಕೆಆರ್‌ಎಸ್ ಹಿನ್ನೀರಿನಲ್ಲಿ ಹೋಗಿ ಬಿದ್ದಿದ್ದ ಯುವಕನ ಶವ ಇದೀಗ ಪತ್ತೆಯಾಗಿದೆ. ಹೀಗಾಗಿ ಸಹೋದರರಿಬ್ಬರೂ ಅಪಘಾತದಲ್ಲಿ ಮೃತಪಟ್ಟಂತಾಗಿದೆ.
ಹೊಸಕೋಟೆ ಗ್ರಾಮದ ವಿಶ್ವ (21) ಮತ್ತು ವಿಷ್ಣು(19) ಮೃತಪಟ್ಟವರು. ಭಾನುವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಬೈಕ್‌ನಲ್ಲಿ ತೆರಳುತ್ತಿದ್ದ ಎಂಬ ಸಹೋದರರಿಬ್ಬರ ಪೈಕಿ ವಿಶ್ವಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಹಾರಿದ್ದ ವಿಷ್ಣು ಇದೀಗ ಶವವಾಗಿ ಹಿನ್ನೀರಿನಲ್ಲಿ ಪತ್ತೆಯಾಗಿದೆ.
ಹೊಸಕೋಟೆಯಿಂದ ಬೈಕ್ ಮೂಲಕ ಕೆ.ಆರ್.ನಗರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಢಿಕ್ಕಿ ಹೊಡೆದಿದ್ದ ಕಾರಿನ ಚಾಲಕ ಪರಾರಿಯಾಗಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss