ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ.
ಪತ್ನಿ ದಾಕ್ಷಾಣವ್ವ ಅವರನ್ನು ಕೊಲೆಗೈದು ಪತಿ ಪ್ರಭು ವಾರತಿ (52) ಮನೆ ಮುಂದೆ ನೇಣಿಗೆ ಶರಣಾಗಿದ್ದಾನೆ.
ಪತ್ನಿ ಶೀಲ ಶಂಕಿಸಿ ನಿತ್ಯ ಗಲಾಟೆ ಮಾಡುತ್ತಿದ್ದ ಪ್ರಭು ನಿನ್ನೆಯೂ ಗಲಾಟೆ ಮಾಡಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಹಾವೇರಿ ಜಿಲ್ಲೆಯ ಎಸ್‌ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.