ಹೊಸದಿಗಂತ ವರದಿ ಮಡಿಕೇರಿ:
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕುಶಾಲನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಸೋಮವಾರಪೇಟೆಯ ಶಾಂತಳ್ಳಿ ಗ್ರಾಮದ ಸೋಮಶೇಖರ್ (45) ಮೃತರು. ಅವಿವಾಹಿತರಾಗಿದ್ದ ಸೋಮಶೇಖರ್ ಸೋಮವಾರಪೇಟೆಯ ಬಾರ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ತಂಗುತ್ತಿದ್ದ ಈತ ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್’ನಡಿಗೆ ಬೀಳಲು ಪ್ರಯತ್ನ ನಡೆಸಿ ವಿಫಲರಾಗಿದ್ದರೆಂದು ಹೇಳಲಾಗಿದೆ.
ರಾತ್ರಿ 8ಗಂಟೆ ಸುಮಾರಿಗೆ ಇಂದಿರಾ ಕ್ಯಾಂಟಿನ್ ಮುಂಭಾಗ ಈತ ಮತ್ತೆ ಬಸ್ ಕೆಳಗೆ ಹಾರಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿರುವುದಾಗಿ ಸಂಚಾರ ಪೊಲೀಸ್ ಠಾಣೆ ಅಧಿಕಾರಿ ಮಾಹಿತಿ ನೀಡಿದ್ದಾರೆ.