ಹೊಸದಿಗಂತ ವರದಿ ಮೈಸೂರು:
ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಸಮೀಪದ ಸೇನಾಪತಿಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಂಜಯ್ಯ ಮೃತಪಟ್ಟವರು. ನಂಜಯ್ಯ ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಈ ಘಟನೆಯ ಸಂಬಂಧ ಬನ್ನೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.