ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ವರದಿ ವಿಜಯಪುರ:

ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.

ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!