ಸೋಮೇಶ್ವರ ರುದ್ರಪಾದೆಯಲ್ಲಿ ಪರ್ಸ್ ,ಚಪ್ಪಲ್ ಬಿಟ್ಟು ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್,ಚಪ್ಪಲ್,ಕೂಲಿಂಗ್ ಗ್ಲಾಸ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಸಮುದ್ರದಲ್ಲಿ ತೀರದಲ್ಲಿ ಪತ್ತೆಯಾಗಿದೆ.

ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಸಾವನ್ನಪ್ಪಿದ ದುರ್ದೈವಿ.

ಉದಯ್ ಅವರು ಬುಧವಾರ ಮದ್ಯಾಹ್ನ‌ ಸೋಮೇಶ್ವರ ಸೋಮನಾಥ ಕ್ಷೇತ್ರದ ಮುಂದುಗಡೆ ತನ್ನ ಆಕ್ಟಿವ ಸ್ಕೂಟರನ್ನ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದಾರೆ.

ರುದ್ರ ಪಾದೆಯಲ್ಲಿ ಪರ್ಸ್ ,ಚಪ್ಪಲ್,ಕೂಲಿಂಗ್ ಗ್ಲಾಸನ್ನ ಬಿಟ್ಟು ನಾಪತ್ತೆಯಾಗಿದ್ದರು.ಬೀಚಲ್ಲಿ ಸುತ್ತಾಡುತ್ತಿದ್ದ ಹುಡಗನೋರ್ವನು ರುದ್ರಪಾದೆಯಲ್ಲಿದ್ದ ಪರ್ಸನ್ನು ಸ್ಥಳೀಯ ಗುಡಂಗಡಿ ಮಾಲಕರಲ್ಲಿ ನೀಡಿದ್ದಾನೆ.ಗೂಡಂಗಡಿ ಮಾಲೀಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್ ಅವರನ್ನ ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ.

ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಶವವನ್ನ ಎಳೆದು ಮೇಲಕ್ಕೆ ಹಾಕಿದ್ದಾರೆ.

ಮೇಲ್ನೋಟಕ್ಕೆ ಉದಯ್ ಅವರು ರುದ್ರಪಾದೆಯಿಂದ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದ್ದು ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

ಮೃತ ಉದಯ್ ಅವರು ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿದ್ದರು.
ಮೃತರು ತಂದೆ,ತಾಯಿ, ಪತ್ನಿ,ಏಕೈಕ ಪುತ್ರನನ್ನ ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!