ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಗ್ಗೆ ದುಃಖಕರ ಘಟನೆ ಸಂಭವಿಸಿದೆ.
ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ.
ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋಗಳು ವೈಟ್ಫೀಲ್ಡ್ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ.
ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಬೆಳ್ಳಂಬೆಳಗ್ಗೆ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

