August 18, 2026
Tuesday, August 18, 2026
spot_img

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ: ಯೆಲ್ಲೋ ಲೈನ್ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಸೋಮವಾರ ಸಂಜೆ ದುರ್ಘಟನೆಯೊಂದು ಸಂಭವಿಸಿದೆ. ಹುಸ್ಕೂರ್ ರೋಡ್ ಮೆಟ್ರೋ ನಿಲ್ದಾಣದ ಸಮೀಪ ವ್ಯಕ್ತಿಯೊಬ್ಬರು ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ಕೆಲಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ರೈಲು ಬರುತ್ತಿದ್ದಾಗಲೇ ಹಳಿಗೆ ಹಾರಿ ಆತ್ಮಹತ್ಯೆ

ಸಂಜೆ ಸುಮಾರು 5.50ರ ವೇಳೆಗೆ ಸುಮಾರು 35 ವರ್ಷದ ವ್ಯಕ್ತಿ ರೈಲು ಸಮೀಪಿಸುತ್ತಿದ್ದ ವೇಳೆ ಏಕಾಏಕಿ ಹಳಿಗೆ ಹಾರಿದ್ದಾನೆ. ಇದನ್ನು ಗಮನಿಸಿದ ಸ್ಟೇಷನ್ ನಿಯಂತ್ರಣ ಕೊಠಡಿ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ಸುರಕ್ಷತಾ ಕ್ರಮ ಕೈಗೊಂಡರು.

ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ

ಘಟನೆಯ ಹಿನ್ನೆಲೆಯಲ್ಲಿ ಯೆಲ್ಲೋ ಲೈನ್‌ನಲ್ಲಿ ಸಂಪೂರ್ಣ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು. ಬಳಿಕ ಆರ್.ವಿ. ರಸ್ತೆ ಮತ್ತು ಎಲೆಕ್ಟ್ರಾನಿಕ್ ಸಿಟಿ ನಡುವಿನ ಮಾರ್ಗದಲ್ಲಿ ಮಾತ್ರ ಸೀಮಿತ ರೈಲು ಸಂಚಾರ ಆರಂಭಿಸಲಾಯಿತು.

ಮೃತದೇಹವನ್ನು ಹಳಿಯಿಂದ ತೆರವುಗೊಳಿಸುವ ಕಾರ್ಯ ನಡೆಸಲಾಗಿದ್ದು, ಹೆಬ್ಬುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !