Friday, December 5, 2025

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಂಗೇರಿ ಮೆಟ್ರೋ ನಿಲ್ದಾಣದ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಈ ನಡುವೆ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರವು ಇದೀಗ ಪುನಃ ಸಹಜ ಸ್ಥಿತಿಗೆ ಮರಳಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಬಳಿಕ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತನಗೌಡ ಮೃತದೇಹವನ್ನು ರಾಜರಾಜೇಶ್ವರಿನಗರ ಆಸ್ಪತ್ರೆಗೆ ರವಾನಿಸಿದ್ದಾರೆ.

ದುರ್ಘಟನೆ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ ಮೈಸೂರು ರಸ್ತೆಯಿಂದ ಚಲ್ಲಘಟ್ಟದವರೆಗಿನ ಮೆಟ್ರೋ ಸಂಚಾರವನ್ನು ಕೆಲಕಾಲ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಮೃತದೇಹವನ್ನು ಹೊರತೆಗೆದು ಸ್ಥಳಾಂತರಿಸಿದ ಬೆನ್ನಲ್ಲೇ, ಮೆಟ್ರೋ ಅಧಿಕಾರಿಗಳು ತಾಂತ್ರಿಕ ಪರಿಶೀಲನೆ ನಡೆಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ.

ಜ್ಞಾನ ಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಬೆಳಿಗ್ಗೆ 09:40 ಕ್ಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದು, ನೇರಳೆ ಮಾರ್ಗದಲ್ಲಿ ರೈಲುಗಳು ವೇಳಾಪಟ್ಟಿಯಂತೆ ಚಲಿಸುತ್ತಿವೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!