April 9, 2026
Thursday, April 9, 2026
spot_img

ದೆಹಲಿಯ ಉತ್ತಮ್ ನಗರ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದ ಹಳಿಗಳಿಗೆ ಹಾರಿ 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ.

ಮಹಾರಾಜ್ ಸಿಂಗ್ ಹಲವಾರು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ಅಣ್ಣನ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದರು.

ಅವರು ಪತ್ನಿ, 18 ವರ್ಷದ ಒಬ್ಬ ಮಗಳು ಮತ್ತು 17 ಮತ್ತು 20 ವರ್ಷದ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಪೊಲೀಸರು CrPC ಸೆಕ್ಷನ್ 174 ರ ಅಡಿಯಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಐದು ದಿನಗಳಲ್ಲಿ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !