Sunday, December 10, 2023

Latest Posts

ನೇತ್ರಾವತಿ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ವರದಿ ಮಂಗಳೂರು:

ಉಳ್ಳಾಲ ನೇತ್ರಾವತಿ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಚಿಕ್ಕಮಗಳೂರು ಮೂಲದ ಪ್ರಸನ್ನ (37) ಎಂಬವರು ನದಿಗೆ ಹಾರಿದ್ದು, ನಾಪತ್ತೆಯಾಗಿದ್ದಾರೆ. ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ಪ್ರಸನ್ನ ಅವರು ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.

ಕೆಫೆ ಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ನಂತರ ಸರಣಿ ಆತ್ಮಹತ್ಯೆಗಳೇ ನೇತ್ರಾವತಿ ಸೇತುವೆಯಲ್ಲಿ ನಡೆದಿತ್ತು. ಆತ್ಮಹತ್ಯೆ ತಡೆಗಾಗಿ ಮುಡಾ ಅನುದಾನದ ಮೂಲಕ 2020 ರಲ್ಲಿ ತಡೆಬೇಲಿ ಅಳವಡಿಸಲಾಯಿತು. ಬಳಿಕ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!