ಹೊಸದಿಗಂತ ವರದಿ ಚಿಕ್ಕಮಗಳೂರು:
ಪೊಲೀಸ್ ಅಧಿಕಾರಿಯೊಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಆಲ್ದೂರು ಪಟ್ಟಣದ ನಿವಾಸಿ ಖಾಲಿದ್ ಹುಸೇನ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.
ಆಲ್ದೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡಿರುವ ಖಾಲಿದ್, ಡೆತ್ ನೋಟ್ ಬರೆದು ವಿಷ ಸೇವಿಸಿದ್ದಾರೆ.
ತಕ್ಷಣವೇ ಸ್ಥಳದಲ್ಲಿದ್ದ ಎಸ್ಪಿ ಕಛೇರಿ ಸಿಬ್ಬಂದಿಗಳು ಖಾಲಿದ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Constabulary is for protection of taxpayers?
When they turn to or resort to persecution, then future of life turns bleak to the persecuted?
Haptha of saptha is often torture?