ಹೊಸದಿಗಂತ ವರದಿ ಮಡಿಕೇರಿ:
ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗದಲ್ಲಿ ವಾಸವಿದ್ದ ಎಲೆಕ್ಟ್ರಿಷಿಯನ್ ಶರವಣ (46) ಎಂಬವರೇ ಮೃತಪಟ್ಟವರು.
ಶನಿವಾರ ಸಂಜೆ ದೇವಾಲಯದ ಬಳಿ ಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ್ದಾಗ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ಭಾನುವಾರ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಆಟೋ ಚಾಲಕ ಮುನೀರ್ ಹಾಗೂ ಸ್ಥಳೀಯರು ಮೇಲಕ್ಕೆತ್ತಿದ್ದು, ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.