ಮಹಾರಾಷ್ಟ್ರದಲ್ಲಿ ದೇವಸ್ಥಾನದ ಪ್ರಸಾದ ತಿಂದು ವ್ಯಕ್ತಿ ಸಾವು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಚಂದ್ರಾಪುರದಲ್ಲಿ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿದ 80 ಮಂದಿ ಅಸ್ವಸ್ಥರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಲೆ 400ಕ್ಕೂ ಅಧಿಕ ಮಂದಿ ಪ್ರಸಾದ ಸೇವಿಸಿದ್ದರು. ಅದರಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ 80 ಮಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಓರ್ವ ಸಾವನ್ನಪ್ಪಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಆರು ಮಂದಿಯನ್ನು ಚಂದ್ರಾಪುರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಮೃತ ವ್ಯಕ್ತಿಯನ್ನು ಗುರುಫೆನ್ ಯಾದವ್ ಎಂದು ಗುರುತಿಸಲಾಗಿದ್ದು ಅವರಿಗೆ ಇತರೆ ಆರೋಗ್ಯ ಸಮಸ್ಯೆಗಳಿದ್ದವು ಎಂದು ವೈದ್ಯರು ಹೇಳಿದ್ದಾರೆ. 24 ಮಂದಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಪ್ರಸಾದದಲ್ಲಿ ವಿಷಯಕಾರಿ ಅಂಶ ಏನಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!