ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 33ನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ.
ಅಯ್ಯಪ್ಪ ನಗರದ ಕೊಡಿಗೇಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, 27 ವರ್ಷದ ದೀಪಾಂಶು ಶರ್ಮಾ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ನಿವೃತ್ತ ವಾಯು ಸೇನಾಧಿಕಾರಿಯ ಪುತ್ರನಾದ ದೀಪಾಂಶು ತನ್ನ ಸ್ನೇಹಿತನ ಅಪಾರ್ಟ್‌ಮೆಂಟ್‌ಗೆ ಬಂದಿದ್ದ. ಬೆಳಗ್ಗೆ 6:45ಕ್ಕೆ ಬಾಲ್ಕನಿಯಲ್ಲಿ ನಿಂತಿದ್ದಾಗ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.