Sunday, June 4, 2023

Latest Posts

ಮೀನು ಹಿಡಿಯಲು ತೆರಳಿದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಹೊಸದಿಗಂತ ವರದಿ, ಕೊಡಗು:
ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಸಮೀಪದ ಹಚ್ಚಿನಾಡು ಗ್ರಾಮದಲ್ಲಿ ನಡೆದಿದೆ.
ಪಂಜರಿ ಯರವರ ಪುಟ್ಟ (45) ಕೆರೆಯಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ.
ಗ್ರಾಮದ ತಾರಾ ಗಣಪತಿ ಅವರ ತೋಟದ ಕಾರ್ಮಿಕನಾಗಿದ್ದ ಪುಟ್ಟ, ಯಾರಿಗೂ ಹೇಳದೆ ಕೆರೆಗೆ ಮೀನು ಹಿಡಿಯಲೆಂದು ತೆರಳಿದ್ದ. ಸಂಜೆಯಾದರೂ ಆತ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಕೆರೆಯ ಬಳಿ ಚಪ್ಪಲಿ ಪತ್ತೆಯಾಗಿದೆ. ಬಳಿಕ ಈಜುಗಾರರು ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!