Wednesday, July 6, 2022

Latest Posts

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ಸಾವು

ಹೊಸದಿಗಂತ ವರದಿ, ಮೈಸೂರು:

ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲೆಂದು ಕೆರೆಗೆ ಹಾರಿದ ವ್ಯಕ್ತಿಯೊಬ್ಬ ನೀರು ಪಾಲಾದ ಘಟನೆ
ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಂಜುoಡ (37) ಮೃತ ವ್ಯಕ್ತಿ. 5 ರಿಂದ 6 ಜನ ಭಾನುವಾರ ಸಂಜೆ 6 ಗಂಟೆಗೆ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ನಂಜುoಡ ಹದಿನಾರು ಕೆರೆಗೆ ಜಿಗಿದಿದ್ದ.
ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸುರಿಯುವ ಮಳೆಯಲ್ಲೂ ನಂಜುoಡನಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದರೂ ಪತ್ತೆಯಾಗಿರಲಿಲ್ಲ.
ಹಾಗಾಗಿ ಸೋಮವಾರ ಬೆಳಗ್ಗೆ ಕಾರ್ಯಚರಣೆ ಮುಂದುವರಿಸಿದಾಗ ನಂಜುoಡನ ಮೃತದೇಹ ಪತ್ತೆಯಾಗಿದೆ. ಈ ಘಟನೆಯಿಂದಾಗಿ ಕೆರಳಿದ ಗ್ರಾಮಸ್ಥರು ಪೊಲೀಸರು ಕಾರ್ಯವೈಖರಿಯ ವಿರುದ್ಧ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಿದರು. ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ, ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಂದೋ ಬಸ್ತ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss