ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಆಕಸ್ಮಿಕ ಗೋಡೆ ಕುಸಿತದಿಂದಾಗಿ ವ್ಯಕ್ತಿಯೋರ್ವರು ಮೃತರಾಗಿದ್ದಾರೆ.
ಬಡಾಲ ಅಂಕಲಗಿಯ ಚನ್ನಪ್ಪ ಕುರಬರ ಗೋಡೆ ಕುಸಿತದಿಂದಾಗಿ ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ.
ಸುದ್ದಿ ತಿಳಿದ ತಕ್ಷಣ ವಿ.ಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು.
ಘಟನೆಯ ಸಂಪೂರ್ಣ ಮಾಹಿತಿ ಪಡೆದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರಕಾರದಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.