ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಬ್ಲಾಸ್ಟ್‌ ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮದುವೆಗೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ.

ಹೋಂ ಥಿಯೇಟರ್ ಸಿಸ್ಟಂನಲ್ಲಿ ಬಾಂಬ್ ಇಟ್ಟಿದ್ದಾಗಿ ನವ ವಿವಾಹಿತೆಯ ಮಾಜಿ ಪ್ರಿಯಕರ ಒಪ್ಪಿಕೊಂಡಿದ್ದಾನೆ.

ಮ್ಯೂಸಿಕ್ ಸಿಸ್ಟಂ ಪ್ಲೇ ಮಾಡುತ್ತಿದ್ದಂತೆ ಸ್ಫೋಟ ಸಂಭವಿಸಿತ್ತು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಹೋಂ ಥಿಯೇಟರ್​ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು, ಅದು ವಧುವಿನ ಮಾಜಿ ಪ್ರಿಯಕರ ನೀಡಿದ್ದ ಉಡುಗೊರೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಇರಿಸಲಾಗಿದ್ದ ಕೊಠಡಿಯ ಗೋಡೆಗಳು ಮತ್ತು ಛಾವಣಿ ಕುಸಿದು ಬಿದ್ದಿದೆ. 22 ವರ್ಷದ ಹೇಮೇಂದ್ರ ಮೆರಾವಿ ಎಂದು ಗುರುತಿಸಲಾದ ವರ ವೈರ್ ಅನ್ನು ಎಲೆಕ್ಟ್ರಿಕ್ ಬ್ಯಾಂಡ್‌ಗೆ ಜೋಡಿಸಿದ ನಂತರ ಹೋಮ್ ಥಿಯೇಟರ್ ಸಿಸ್ಟಂ ಸ್ವಿಚ್ ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದ ಘಟನೆ ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿತ್ತು.

ಆರೋಪಿಯನ್ನು ಸರ್ಜು ಎಂದು ಗುರುತಿಸಲಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪೊಲೀಸರು ಮದುವೆಯ ಸಮಯದಲ್ಲಿ ಬಂದಂತಹ ಉಡುಗೊರೆಗಳ ಪಟ್ಟಿಯ ಕುರಿತು ತನಿಖೆ ಮಾಡಲು ಪ್ರಾರಂಭಿಸಿದಾಗ, ಮ್ಯೂಸಿಕ್ ಸಿಸ್ಟಂ ವಧುವಿನ ಮಾಜಿ ಪ್ರೇಮಿಯ ಉಡುಗೊರೆ ಎಂಬುದು ತಿಳಿದುಬಂದಿದೆ. ಪ್ರೇಯಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ ಎಂದು ಕೋಪದಿಂದ ಆತ ಈ ಕೆಲಸ ಮಾಡಿದ್ದ ಎಂಬ ಮಾಹಿತಿ ದೊರೆತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!