ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮೈಸೂರು:
ವ್ಯಕ್ತಿಯೊಬ್ಬರು ಕೊರೋನಾ ಹಿನ್ನಲೆಯಲ್ಲಿ ತಮ್ಮ ಮಗಳ ಮದುವೆಯನ್ನು ಸರಳವಾಗಿ ಮಾಡಿ, ಅದರಿಂದ ಉಳಿದ ಹಣವನ್ನು ಬಡಕುಟುಂಬಗಳಿಗೆ ಹಂಚಿಕೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ತಿಲಕ್ ನಗರದ ಹರೀಶ್ ಎಂಬುವವರ ಮಗಳ ಮದುವೆ ಮೇ 12 ಮತ್ತು 13ರಂದು ನಿಗದಿಯಾಗಿತ್ತು. ಆದರೆ, ಕೊರೋನಾ ಸೋಂಕು ವಿಪರೀತವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಹರೀಶ್ ತಮ್ಮ ಮಗಳ ಮದುವೆಯನ್ನು ಮನೆಯಲ್ಲಿಯೇ ಸರಳವಾಗಿ ಮಾಡಿ, ಉಳಿದ 2 ಲಕ್ಷ ರೂ.ಗಳನ್ನು 40 ಬಡ ಕುಟುಂಬಗಳಿಗೆ ತಲಾ 5 ಸಾವಿರದಂತೆ ನೀಡುವ ಮೂಲಕ ಸಂಕಷ್ಟದ ಪರಿಸ್ಥಿತಿಯನ್ನು ಮಾನವೀಯತೆ ಮೆರೆದಿದ್ದಾರೆ.