ಮನೆಯ ಮೇಲೆ ಪಾಕ್ ಧ್ವಜ ಹಾಕಿದವನಿಗೆ, ತಯಾರಿಸಿದವನಿಗೆ ಸಿಕ್ಕಿತು ಪೊಲೀಸರ ಆತಿಥ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತನ್ನ ಮನೆಯಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜ ಹಾರಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಕುಶಿನಗರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಿಲ್ಲೆಯ ತರಿಯಾ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯ ವೇದುಪಾರ್ ಮುಸ್ತಾಕ್ವಿಲ್ ಗ್ರಾಮದ ನಿವಾಸದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ. ಪೊಲೀಸರಿಗೆ ಈ ಮಾಹಿತಿ ಲಭ್ಯವಾದ ಕೂಡಲೇ ಧ್ವಜವನ್ನು ಇಳಿಸಲಾಗಿದೆ ಎಂದು ಪೊಲೀಸ್ ಹೆಚ್ಚುವರಿ ಸೂಪರಿಂಟೆಡೆಂಟ್ ರಿತೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ಬಂಧಿತ ಆರೋಪಿ ಸಲ್ಮಾನ್ (21) ಮತ್ತು ಧ್ವಜ ತಯಾರಿಸಿದ ಆತನ ಚಿಕ್ಕಮ್ಮ ಶಹನಾಜ್ (22) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!